ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಣೆ

ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು.