January 31, 2026

ಕನ್ನಡ ಯೂಟ್ಯೂಬ್ ಇತಿಹಾಸದಲ್ಲೇ ಸಂಚಲನ ಸೃಷ್ಟಿಸಿದ “ದೂತ – ಸಮೀರ್” ವೀಡಿಯೊ: ರಾಜ್ಯಾದ್ಯಂತ ಆಲರ್ಟ್ ಆಗುವಂತೆ ಪೊಲೀಸರಿಗೆ ಸೂಚಿಸಿದ ಡಿಜಿಪಿ

0
image_editor_output_image-1296676769-1741213813751.jpg

ಬೆಂಗಳೂರು: ಇಡೀ ರಾಜ್ಯ ಮಾತ್ರವಲ್ಲದೆ ದೇಶದ ಗಮನ ಸೆಳೆದಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಯೂಟ್ಯೂಬರ್ “ದೂತ ಸಮೀರ್” ಮಾಡಿರುವ ವಿಡಿಯೋ ಸಂಚಲನ ಸೃಷ್ಟಿಸಿದೆ.

ಇದರ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ರಾಜ್ಯಾದ್ಯಂತ ಆಲರ್ಟ್ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ. ಸದ್ಯ ಈ ವಿಡಿಯೋವನ್ನು 1.33 ಕೋಟಿ ಜನರು ವೀಕ್ಷಣೆ ಮಾಡಿದ್ದು, 1 ಲಕ್ಷ ಮಂದಿ ಲೈಕ್ ಮಾಡಿದ್ದಾರೆ. 45 ಸಾವಿರ ಮಂದಿ ಕಾಮೆಂಟ್ ಮಾಡಿದ್ದು, ಧೂತ ಸಮೀರ್ ಅವರ youtube subcribes 60,000 ದಿಂದ 6ಲಕ್ಷಕ್ಕೆ ಏರಿಕೆ ಆಗಿದೆ.

ಬುಧವಾರ ಈ ಕುರಿತು ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಸಂದೇಶ ರವಾನಿಸಿರುವ ಅವರು, ಇತ್ತೀಚಿಗೆ ಸಮೀರ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟಿದ್ದು, ಈ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆದರೆ, ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ, ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ‌. ಆದ್ದರಿಂದ, ಘಟಕಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್ ಗಳನ್ನು ಚುರುಕುಗೊಳಿಸುವಂತೆ ಸೂಚಿಸಲಾಗಿದೆ. ಅದೇ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಕುರಿತು ನಿಗಾ ಇಟ್ಟು ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಲಾಗಿದೆ.

ಕನ್ನಡದ ಜನಪ್ರಿಯ ಯೂಟ್ಯೂಬರ್ ಸಮೀ‌ರ್ ಎಂ.ಡಿ ಅವರು ತಮ್ಮ ‘ಧೂತಾ’ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ಮತ್ತು ಸೌಜನ್ಯ ಪ್ರಕರಣದ ಬಗ್ಗೆ ಚರ್ಚಿಸುವ ಯೂಟ್ಯೂಬ್ ವಿಡಿಯೋ, ಇದು ಸಾಮಾಜಿಕ ಮಾಧ್ಯಮಗಳಲ್ಲಿ, ವಿಶೇಷವಾಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ವರ್ಕ್) ಬಳಸಿ ವಿಡಿಯೋವನ್ನು ವೀಕ್ಷಿಸಬಹುದು ಎಂದು ಕೆಲವರು ಸೂಚಿಸಿದ್ದರೂ, ವಿಡಿಯೋವನ್ನು ಇನ್ನು ಮುಂದೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಬಳಕೆದಾರರು ಹೇಳಿದ್ದಾರೆ.

@officialmemes_07 ಅವರ ಇನ್ನಾ ಗ್ರಾಮ್ ಪೋಸ್ಟ್ ವಿಡಿಯೋ ಕಣ್ಮರೆಯಾಗಿರುವುದನ್ನು ಗಮನ ಸೆಳೆದಾಗ ಈ ವಿಷಯವು ಮತ್ತಷ್ಟು ಗಮನ ಸೆಳೆಯಿತು, ಅದನ್ನು ತೆಗೆದುಹಾಕುವ ಹಿಂದಿನ ಊಹಾಪೋಹಗಳನ್ನು ಹುಟ್ಟುಹಾಕಿತು. ಈ ವಿಡಿಯೋ youtube ನಲ್ಲಿ dootha sameer md ಎಂಬ ಹೆಸರಿನಲ್ಲಿ ಲಭ್ಯವಿದೆ.

Leave a Reply

Your email address will not be published. Required fields are marked *

error: Content is protected !!