March 19, 2026

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿ ಕತ್ತು ಸೀಳಿ ಕೊಂದು ಪ್ರಿಯಕರ ಆತ್ಮಹತ್ಯೆ

0
image_editor_output_image-1612644542-1741216473492.jpg

ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೇಂಟಿಂಗ್ ಕೆಲಸ ಮಾಡ್ತಿದ್ದ ಪ್ರಶಾಂತ್ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಪ್ರಶಾಂತ್ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ, ಸಂಬಳ ಜಾಸ್ತಿ ತೆಗೆದುಕೋ ಎಂದು ಬುದ್ಧಿವಾದ ಹೇಳಿದ್ದರು. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ವಿವಾಹ – ಮದುವೆಯಾದ 3 ದಿನಕ್ಕೆ ಹೃದಯಾಘಾತದಿಂದ ನವವಿವಾಹಿತ ಸಾವು

ಪ್ರಶಾಂತ್ ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಗೆ ವಿಷ ಕುಡಿಸಲು ಯತ್ನಿಸಿದ್ದ. ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿ, ಅದೇ ಚಾಕುವಿನಿಂದ ಆತನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!