March 5, 2026

ಮಂಗಳೂರು ಜೈಲಿನಲ್ಲಿ ಫುಡ್ ಪಾಯಿಸನ್: 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

0
image_editor_output_image-1616338626-1741216556760.jpg

ಮಂಗಳೂರು: ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ.

ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಸ್ವಸ್ಥ ಕೈದಿಗಳನ್ನ ಸಹ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು‌ ಹಿಡಿದಿದ್ದರು. ಆಕ್ರೋಶಗೊಂಡಿದ್ದ ಕೈದಿಗಳನ್ನ ವಾಹನದಿಂದ ಕೆಳಗಿಳಿಸಿದ ಪೊಲೀಸರು, ಅಸ್ವಸ್ಥ ಕೈದಿಗಳನ್ನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!