ಮಂಗಳೂರು: ಆಟೊ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ: ರಿಕ್ಷಾ ಚಾಲಕನ ಬಂಧನ
ಮಂಗಳೂರು: ಆಟೊರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 75 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೊರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂದರು ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32) ಎಂಬಾತನನ್ನು ಬಂಧಿಸಲಾಗಿದೆ.
3,75,000 ರೂ. ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.




