ಬೈಕ್‌ಗೆ ಹಿಂಬದಿಯಿಂದ ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಹುಣಸೂರು; ಬೈಕ್‌ಗೆ ಹಿಂಬದಿಯಿಂದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆದ್ದಾರಿಯ ಬೈಪಾಸ್ ನಲ್ಲಿ ನಡೆದಿದೆ.
ತಾಲೂಕಿನ ಕೊತ್ತೆಗಾಲದ ಲೇ.ದೇವರೆಗೌಡರ ಪುತ್ರ ಮಲ್ಲೇಶ್(49)ಸಾವನ್ನಪ್ಪಿದವರು. ಇವರು ಪರಿವರ್ತನ ಸಂಸ್ಥೆಯ ಸ್ವಸಹಾಯ ಸಂಘಗಳ ಲೆಕ್ಕ ಪರಿಶೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಮೈಸೂರು-ಬಂಟ್ವಾಳ ಹೆದ್ದಾರಿ-275ರ ಹೆದ್ದಾರಿಯ ಹುಣಸೂರು ನಗರದ ಬೈಪಾಸ್ ರಸ್ತೆಯ ಸಂತೋಷ್ ಬಾರ್ ಬಳಿಯಲ್ಲಿ ತಾಲೂಕು ಕಚೇರಿಯಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಕಚೇರಿಗೆ ತೆರಳುತ್ತಿದ್ದ ಮಲ್ಲೇಶ್ ಬೈಕಿಗೆ ಕುಶಾಲನಗರದಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಅತೀವೇಗದಿಂದ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ತೀವ್ರಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.





