2025-26ನೇ ಸಾಲಿನ ರಾಜ್ಯ ಬಜೆಟ್: ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150 ಕೋಟಿ ರೂ. ಮೀಸಲು
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಆಯವ್ಯಯ ಮಂಡಿಸಿದ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150 ಕೋಟಿ ರೂ. ಮೀಸಲು ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಕಬರ್ ಸ್ಥಾನ ರಕ್ಷಣೆ, ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ ಗೆ 200 ರೂಪಾಯಿ ನಿಗದಿ: ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.




