2025-26ನೇ ಸಾಲಿನ ರಾಜ್ಯ ಬಜೆಟ್: ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್: ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.
SC/ST ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ: ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.




