March 5, 2026

2025-26ನೇ ಸಾಲಿನ ರಾಜ್ಯ ಬಜೆಟ್: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಸಾಶನ ಹೆಚ್ಚಳ, ಕುಟುಂಬ ಮಾಸಾಶನವು 7,500ಕ್ಕೆ ಹೆಚ್ಚಳ

0
image_editor_output_image1290322780-1741335926817.jpg

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

ಕನ್ನಡ ಸಿನಿಮಾಗಳಿಗಾಗಿ ಒಟಿಟಿ ವೇದಕೆ ಸೃಜಿಸಲು ಕ್ರಮ ಹಾಗೂ ಮಲ್ಟಿಪ್ಲೆಕ್ಸ್‌ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ ₹200 ಸೀಮಿತ

ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ₹3 ಕೋಟಿ ವೆಚ್ಚದಲ್ಲಿ ಚಲನಚಿತ್ರ ಭಂಡಾರ ಸ್ಥಾಪನೆ

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಸಾಶವನ್ನು ₹12 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಳ ಹಾಗೂ ಕುಟುಂಬ ಮಾಸಾಶನವು ₹ 6 ಸಾವಿರದಿಂದ ₹7,500ಕ್ಕೆ ಹೆಚ್ಚಳ

ಮಾಧ್ಯಮ ಮಾನ್ಯತೆ ಹೊಂದಿರುವ 2,500 ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ ₹5 ಲಕ್ಷ ನಗದುರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನ ಯೋಜನೆ ಜಾರಿ

ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು ಒತ್ತುವರಿ ತೆರವು. ಭೂ ವರಾಹ ಯೋಜನೆಯಡಿ ದೇವಾಲಯಗಳ ಸ್ಥಿರಾಸ್ತಿಗಳ ದಾಖಲೀಕರಣ

Leave a Reply

Your email address will not be published. Required fields are marked *

error: Content is protected !!