March 5, 2026

2025-26ನೇ ಸಾಲಿನ ರಾಜ್ಯ ಬಜೆಟ್: ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿ

0
image_editor_output_image1152317232-1741337276782.jpg

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ.

ಮೀನುಗಾರಿಕೆ: ರಾಜ್ಯದ ಮತ್ರ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.

ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು.

ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.

ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ: ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸಲಾಗುವುದು.

ಕರಾವಳಿ ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಸಮುದ್ರ ಕೊರೆತ ತಗ್ಗಿಸುವುದು.

Leave a Reply

Your email address will not be published. Required fields are marked *

error: Content is protected !!