ವಿಟ್ಲ: ಹಾಡ ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ

ವಿಟ್ಲ: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ.
ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ ಗಣೇಶ್ ಗೌಡ ಎಂಬವರ ಮನೆಯಲ್ಲಿ ಹಾಡುಹಹಲೇ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಏಳೂವರೆ ಪವನ್ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ನಾಗರಾಜ್ ಹೆಚ್.ಇ ಮತ್ತು ಎಸ್ ಐ ವಿದ್ಯಾರವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.