March 5, 2026

ಪಿಯುಸಿ ಪರೀಕ್ಷೆ: ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್‌ ಕಾರ್ಯಕರ್ತೆಯ ಬಂಧನ

0
image_editor_output_image1896129475-1741390447661.jpg

ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್‌ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ. 5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ.

ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್‌ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ.

ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿದೆ. ಮಿಲಿಂದ್ ಶಾಲೆಯ ಪ್ರಾಂಶುಪಾಲರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣಾ ಪಾಟೀಲ್‌ಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!