ಬಂಟ್ವಾಳ: ನಾಪತ್ತೆಯಾಗಿದ್ದ ದಿಗಂತ್ ಪತ್ತೆ
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ದಿಗಂತ್ ನನ್ನು ಪೊಲೀಸರು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳ, ಡ್ರೋನ್, ಶ್ವಾನ ದಳ ಸೇರಿದಂತೆ ದ.ಕ.ಜಿಲ್ಲೆಯ ಪೊಲೀಸ್ ಠಾಣೆಯ ಸುಮಾರು 150 ಪೊಲೀಸ್ ಅಧಿಕಾರಿಗಳಿಂದ ಶನಿವಾರ ಶೋಧಕಾರ್ಯ ನಡೆಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಅವರು ತಿಳಿಸಿದ್ದಾರೆ.
ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ದಿಗಂತ್ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.
ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸಂಪೂರ್ಣ ವಿವರ ಲಭ್ಯವಾಗಿಲ್ಲ.




