ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಅವರು ಎರಡು ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. ಕುಂಜತ್ತಬೈಲ್ ವಾರ್ಡ್ ಅನ್ನು ಪ್ರತಿನಿಧಿಸಿದ್ದರು.
ಪಕ್ಷದ ಸಂಘಟನೆಯಲ್ಲಿ ಸಕ್ರಿಯ ತೊಡಗಿಸಿಕೊಂಡಿದ್ದರು.
ಅವಿವಾಹಿತರಾಗಿದ್ದ ಅವರು ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಮೂಲಕ ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.




