“ಮೊದಲು ತೆಳ್ಳಗೆ ಸುಂದರವಾಗಿದ್ದೆ, ಈಗ ದಪ್ಪಗಾಗಿದ್ದಿ ಎಂದು ಪತ್ನಿಗೆ ಖಾರದ ಪುಡಿ ಎರಚಿ ಹಲ್ಲೆ: ಪತಿಯ ವಿರುದ್ಧ FIR ದಾಖಲು
ಬೆಂಗಳೂರು: ಮದುವೆ ಆಗುವಾಗ ತೆಳ್ಳಗೆ ಸುಂದರವಾಗಿದ್ದೆ, ಈಗ ದಪ್ಪಗಾಗಿದ್ದೀಯಾ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿ, ಮಾವ ಹಾಗೂ ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿರುವುದು ನಗರದ ನೆಲಗೆದರನಹಳ್ಳಿಯಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಪತಿ ಪುಲಿ ಸಾಯಿಕುಮಾರ್ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ಸೌಂದರ್ಯದ ವಿಚಾರಕ್ಕೆ ಪದೇ ಪದೇ ಪತಿ ಗಲಾಟೆ ಮಾಡುತ್ತಿದ್ದ. ಅಲ್ಲದೇ ವರದಕ್ಷಿಣೆ ವಿಚಾರಕ್ಕೂ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ನನ್ನ, ಮಗ ಹಾಗೂ ನನ್ನ ತಂದೆಯ ಮೇಲೆ ಶನಿವಾರ ಪತಿ ಹಲ್ಲೆ ಮಾಡಿದ್ದಾನೆ ಎಂದು ಉಲ್ಲೇಖಿಸಿದ್ದಾಳೆ.
ಈ ಹಿಂದೆಯೂ ಪುಲಿ ಸಾಯಿಕುಮಾರ್ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಇದೀಗ ಮತ್ತೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದು, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




