February 2, 2026

ಮಂಗಳೂರು: ಮಳಿಗೆಯಲ್ಲಿ ಅಗ್ನಿ ಅವಘಡ

0
image_editor_output_image2146532381-1741478754451.jpg

ಮಂಗಳೂರು: ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳುರಿನ ಕುದ್ರೋಳಿ ಅಳಕೆಯಲ್ಲಿ (ಮಾ.8) ಸಂಭವಿಸಿದೆ.

ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಹೊರ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ದೌಡಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿರುವ ಇತರ ಅಂಗಡಿಗಳಲ್ಲಿದ್ದ ಜನರನ್ನು ತೆರವು ಮಾಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!