March 5, 2026

ಮನೆಯಲ್ಲಿಯೇ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image1100184072-1741563521381.jpg

ತೀರ್ಥಹಳ್ಳಿ : ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ.

ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ) ನೇಣಿಗೆ ಶರಣಾದ ದುರ್ದೈವಿ.

ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

>

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!