ಗಾಂಜಾ ಮಾರಾಟ: 30 ಕೆ.ಜಿ. ಗಾಂಜಾ ಸಹಿತ ಆರೋಪಿಯ ಬಂಧನ
ವಿರಾಜಪೇಟೆ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡುತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಸತ್ಯನಗರದ ನಿವಾಸಿ ಇಲಿಯಾಸ್ (47) ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ 30 ಕೆಜಿ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರದ ನಿಸರ್ಗ ಬಡಾವಣೆಯ ಕಿರುಮಕ್ಕಿ ಜಂಕ್ಷನ್ ಸಮೀಪ ಗಾಂಜಾ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.




