ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಐವರು ಸಜೀವ ದಹನ
ರಾಂಜಿ: ಜಾರ್ಖಂಡ್‌ನ ಗರ್ವಾದಲ್ಲಿನ ಪಟಾಕಿ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿ ಐವರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಗರ್ವಾ ಜಿಲ್ಲೆಯ ರಂಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ದೀಪಕ್ ಪಾಂಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.





