ವಿಷದ ಇಂಜೆಕ್ಷನ್ ಚುಚ್ಚಿ BJP ಮುಖಂಡನ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಮುಖಂಡರೊಬ್ಬರನ್ನು ಮೂವರು ಅಪರಿಚಿತರು ವಿಷದ ಇಂಜೆಕ್ಷನ್ ಚುಚ್ಚಿ ಹತ್ಯೆಗೈದಿದ್ದಾರೆ.
ಮೃತರನ್ನು ಗುಲ್ಫಮ್ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ. ಮೂವರು ವ್ಯಕ್ತಿಗಳು ಗುಲ್ಫಮ್ ಸಿಂಗ್ ಯಾದವ್ ಅವರನ್ನು ಭೇಟಿಯಾಗಲು ಸೋಮವಾರ ಮಧ್ಯಾಹ್ನ ಬೈಕ್‌ನಲ್ಲಿ ಬಂದಿದ್ದರು.
ಬಳಿಕ ಅವರೊಂದಿಗೆ ಕುಳಿತು ಮಾತನಾಡಿ, ಯೋಗ ಕ್ಷೇಮ ವಿಚಾರಿಸಿದ್ದಾರೆ. ಬಳಿಕ ದುಷ್ಕರ್ಮಿಗಳು ಕುಡಿಯಲು ನೀರು ಕೇಳಿದ್ದಾರೆ. ನೀರು ನೀಡಿ ಮಲಗಿದಾಗ ಸಿಂಗ್ ಅವರ ಹೊಟ್ಟೆಗೆ ವಿಷದ ಇಂಜೆಕ್ಷನ್ ಚುಚ್ಚಿ ಪಾರಾರಿಯಾಗಿದ್ದಾರೆ.