ಮೂಡುಬಿದಿರೆ: ಬಾಲಕಿಗೆ ಕಿರುಕುಳ ನೀಡಿದ ಆರೋಪಿಯ ಬಂಧನ

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ.
ಈತ ಮಾ.8ರಂದು ಸಂಜೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದ ಎಂದು ದೂರಲಾಗಿದೆ.