March 14, 2025

ಉಡುಪಿ: ಗರುಡ ಗ್ಯಾಂಗ್ ಸದಸ್ಯನ ಮೇಲೆ ಫೈರಿಂಗ್ ಮಾಡಿ ಬಂಧನ

0

ಉಡುಪಿ : ಹಿರಿಯಡ್ಕದಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್‌ಪೆಕ್ಟರ್‌ ದೇವರಾಜ್ ಫೈರಿಂಗ್ ಮಾಡಿದ್ದಾರೆ.

ಪ್ರಕರಣ ಸಂಬಂಧ ಮಾ. 12ರಂದು ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಇಸಾಕ್ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿತ್ತು.

ಈ ನಾಲ್ವರು ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರೆತರಲಾಗುತ್ತಿತ್ತು. ಹೀಗೆ ಪೊಲೀಸ್‌ ವಾಹನದಲ್ಲಿ ಸಾಗುತ್ತಿದ್ದಾಗ ಹಿರಿಯಡ್ಕ ಗುಡ್ಡೆಯಂಗಡಿ ಬಳಿ ಸುಮಾರು 7.15ಕ್ಕೆ ಆರೋಪಿ ಇಸಾಕ್ ತನಗೆ ಮೂತ್ರ ವಿಸರ್ಜನೆ ಮಾಡಲಿರುವುದಾಗಿ ಹೇಳಿ ಹಠ ಹಿಡಿದು ವಾಹನವನ್ನು ನಿಲ್ಲಿಸುವಂತೆ ಮಾಡಿದ್ದನು.

 

 

ಮೂತ್ರ ವಿಸರ್ಜನೆ ಅನಂತರ ಏಕಾಏಕಿ ಈತನೊಂದಿಗೆ ಇದ್ದ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯವರನ್ನು ತಳ್ಳಿ ಅವರ ಮೇಲೆ, ಆತನ ಕೈಗೆ ಅಳವಡಿಸಲಾಗಿದ್ದ ಲೀಡಿಂಗ್ ಚೈನ್ ಅನ್ನು ಬಳಸಿ ಬಲವಾಗಿ ಗುದ್ದಿದ್ದನು. ಅನಂತರದಲ್ಲಿ ಇಬ್ಬರು ಪೊಲೀಸ್‌ ಉಪನಿರೀಕ್ಷಕರು ಹಿಡಿಯಲು ಪ್ರಯತ್ನಿಸಿದಾಗ ಅವರಿಗೆ ಬಲವಾಗಿ ಒದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದನು.

ಹೀಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಆತನ ಲೀಡಿಂಗ್ ಚೈನ್ ಕರೆ ತರುತ್ತಿದ್ದ ವಾಹನದ ಎದುರಿನ ಗ್ಲಾಸಿಗೆ ಬಡಿದು, ಗ್ಲಾಸ್ ಒಡೆದಿದೆ. ಪರಿಣಾಮ ಅಲ್ಲಿದ್ದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಾಯಗೊಂಡಿರುತ್ತಾರೆ. ಈ ವೇಳೆ ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್‌ ಅವರು ಎಚ್ಚರಿಕೆ ನೀಡಿದ್ದು, ಇಸಾಕ್ ಕೇಳದೇ ಇದಾಗ ಗಾಳಿಯಲ್ಲಿ ಗುಂಡು ಹಾರಿಸುತ್ತಾರೆ.

Leave a Reply

Your email address will not be published. Required fields are marked *

error: Content is protected !!