ಮುಲ್ಕಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮುಲ್ಕಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ (21) ಎಂದು ಗುರುತಿಸಲಾಗಿದೆ.
ಮೃತ ಜೆಸ್ಲಿಟಾ ಸೆರಾವೋ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಗ್ರಿ ಅಂತಿಮ ವರ್ಷದ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದರು. ಬೆಳಗ್ಗಿನ ಜಾವ ಹೆತ್ತವರು ಪಕ್ಷಿಕೆರೆ ಚರ್ಚ್‌ಗೆ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯ ಫ್ಯಾನ್‌ಗೆ ಚೂಡಿದಾರ್ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.