ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಹಾಸನ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಪೂರ್ವಿಕಾ(13) ಮೃತ ಬಾಲಕಿ. ನಿನ್ನೆಯಿಂದಲೇ ತಾನು ಸುಸ್ತಾಗಿರುವುದಾಗಿ ಹೇಳಿದ್ದ ಪೂರ್ವಿಕಾ, ಇಂದು ಬೆಳಿಗ್ಗೆ ಕುಸಿದು ಬಿದ್ದಳು.
ತಕ್ಷಣವೇ ಶಾಲಾ ಸಿಬ್ಬಂದಿ ಮತ್ತು ಶಿಕ್ಷಕರು ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದರು. ಆದರೆ ಆಕೆ ದಾರಿ ಮಧ್ಯೆಯೇ ಮೃತಪಟ್ಟಿದ್ದಳು.