March 5, 2026

ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

0
image_editor_output_image1878204872-1741910325169.jpg

ಹಾವೇರಿ: ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಂಪವ್ವ ಕುಟುಂಬ ಫೈನಾನ್ಸ್ ಕಂಪನಿ ಬಳಿ 50 ಸಾವಿರ ರೂ. ಹಣ ಸಾಲ ಪಡೆದುಕೊಂಡಿದ್ದರು. ತಿಂಗಳಿಗೆ ಎರಡು ಕಂತುಗಳಂತೆ 1250 ರೂ ಕಟ್ಟುತ್ತಿದ್ದರು. ಸಂಪವ್ವ ಮತ್ತು ಆಕೆಯ ಮಗಳು ಗದ್ದೆ ಕೆಲಸಕ್ಕೆ ಹೋಗಿದ್ದಾಗ ಕಂತು ವಸೂಲಿಗೆ ಫೈನಾನ್ಸ್ ಸಿಬ್ಬಂದಿ ಬಂದಿದ್ದಾರೆ. ಈ ವೇಳೆ ಮನೆಯಲ್ಲಿ ಇಟ್ಟಿದ್ದ 25 ಸಾವಿರ ರೂ ಹಣ, ಕಿವಿ ಓಲೈ ಕೊಂಡೊಯ್ದಿರುವುದಾಗಿ ಆರೋಪ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!