ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ: ಕೊಲೆ ಮಾಡಿ ಹೂತು ಹಾಕಿದ್ದ ಹಂತಕರು

ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಹತ್ಯೆಯಾಗಿದೆ.
ಹತ್ಯೆಯಾದ ಯುವತಿಯನ್ನು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ಗುರುತಿಸಲಾಗಿದೆ. ಮಾ.6 ರಂದು ಯುವತಿಯ ಮೃತದೇಹ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು.
ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಬಳಿಕ ವಾರಸುದಾರರು ಯಾರೂ ಇಲ್ಲದ ಹಿನ್ನೆಲೆ, ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವವನ್ನು ಹೂತು ಹಾಕಲಾಗಿತ್ತು.
ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಬಳಿಕ ತನಿಖೆ ತೀವ್ರಗೊಳಿಸಿದ ಹಲಗೇರಿ ಪೊಲೀಸರು, ಮಾ.3 ರಂದು ಕಾಣೆಯಾಗಿದ್ದ ಯುವತಿಯ ಗುರುತನ್ನು ಪತ್ತೆಹಚ್ಚಿದ್ದರು. ಇನ್ನೂ ಸ್ವಾತಿ ಪೋಷಕರು, ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ.