ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆ ಮತ್ತು ಇಫ್ತಾರ್ ಕೂಟ

ಮಂಗಳೂರು: ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ ಹಾಗೂ ಇಫ್ತಾರ್ ಕೂಟವು ಬಿ ಸಿ ರೋಡಿನ ಪಕ್ಷದ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪಕ್ಷವು ದೇಶಾದ್ಯಂತ ಹೋರಾಟದ ಕಿಚ್ಚನ್ನು ಹಬ್ಬಿಸಿದ ಕಾರಣಕ್ಕಾಗಿ ಎಸ್ ಡಿ ಪಿ ಐ ರಾಷ್ಟ್ರಾಧ್ಯಕ್ಷರಾದ ಎಂಕೆ ಫೈಝಿಯವರನ್ನು ಕೇಂದ್ರ ಸರ್ಕಾರವು EDಯನ್ನು ದುರುಪಯೋಗ ಪಡಿಸಿ ಬಂಧಿಸಿರುವುದು ಒಪ್ಪುವಂತದ್ದಲ್ಲ. ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರವನ್ನು ಸಭೆಯಲ್ಲಿ ಖಂಡಿಸಲಾಯಿತು.
ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಬಗ್ಗೆ ಚರ್ಚಿಸಿ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ ಬೂತ್ ಸಮಿತಿಗಳನ್ನು ಬಲಪಡಿಸಲು ತೀರ್ಮಾನಿಸಲಾಯಿತು.
ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ನಡೆಸುತ್ತಿರುವ ಹೋರಾಟವನ್ನು ಮುಂದುವರೆಸಲು ಮತ್ತು ಅಗತ್ಯವಾದರೆ ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ಸ್ವಾಗತಿಸಿದರೆ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಧನ್ಯವಾದಗೈದರು. ಜಿಲ್ಲಾ ಉಪಾಧ್ಯಕ್ಷರುಗಳಾದ ಮೂನಿಷ್ ಅಲಿ, ಇನಾಸ್ ರೊಡ್ರಿಗಸ್, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ, ಕಾರ್ಯದರ್ಶಿ ನವಾಝ್ ಕಟ್ಟೆ, ಮಹಿಳಾ ಘಟಕವಾದ ವಿಮ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹಿದಾ ಸಾಗರ್ ಹಾಗೂ ಜಿಲ್ಲಾ ಸಮಿತಿ ಸದಸ್ಯರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.