ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ಪ್ರಚೋ ದನಕಾರಿ ಭಾಷಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಬಿ. ರಮಾನಾಥ ರೈ ಆಗ್ರಹ

ಮಂಗಳೂರು:ವಿದ್ಯಾರ್ಥಿ ದಿಗಂತ್ ನಾಪತ್ತೆ ಸಂದರ್ಭದಲ್ಲಿ ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿ ಸುವ ರೀತಿಯಲ್ಲಿ ಪ್ರಚೋ ದನಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮತೀಯ ಸೂಕ್ಷ್ಮ ಎಂಬ ಹಣೆಪಟ್ಟಿ ಇದೆ. ಹೀಗಿರುವಾಗ ಮತೀಯವಾದಿ ಸಂಘಟನೆಗಳು ಜನರಲ್ಲಿ ತಪ್ಪು ಭಾವನೆ ಮೂಡಿಸಿ ಸಾಮರಸ್ಯ ಕದಡುವ ಪ್ರಯತ್ನ ನಡೆಸಿದ್ದು ಖಂಡನೀಯ ಎಂದರು. ಕೋಮು ಪ್ರಚೋದನೆಗೆ ಕಾರಣ ಕರ್ತರಾಗುವವರನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತನಿಖಾ ತಂಡ ರಚಿಸಬೇಕು ಎಂದರು.