ಸುಳ್ಯ: ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿ ಪಲ್ಟಿ

ಸುಳ್ಯ : ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿರುವ ಘಟನೆ ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಘಟನೆಯ ಪರಿನಾಮ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿರುತ್ತದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.