ಮೈಸೂರು: ನೀರಿನಲ್ಲಿ ಮುಳುಗಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಜಲಸಮಾಧಿಯಾದ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನಲ್ಲಿ ನಡೆದಿದೆ.
ಚೌಡಯ್ಯ (70), ಭರತ್ (13), ಧನುಷ್ (10) ಮೃತ ದುರ್ದೈವಿಗಳು. ಮೃತರು ಟಿ.ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳಾಗಿದ್ದು, ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.