ಪೊಲೀಸರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ
ಚಿಕ್ಕಮಗಳೂರು: ತಹಶೀಲ್ದಾರ್ ಹಾಗೂ ಪೊಲೀಸರ ಎದುರೇ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ರಫೀಕ್ ಶೃಂಗೇರಿಯಲ್ಲಿ ಕಲ್ಲಂಗಡಿ ಹಣ್ಣಿನ ಮಾರಾಟಕ್ಕಾಗಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು. ಈ ಶೆಡ್‍ನ್ನು ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಅವರ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.





