ಕಾರು ನಿಯಂತ್ರಣ ತಪ್ಪಿ ಕಾರು ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೀದರ್: ಕಾರು ನಿಯಂತ್ರಣ ತಪ್ಪಿ ಅಪಘಾತವಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಉಡಬಾಳ ಗ್ರಾಮದ ಕ್ರಾಸ್ ಬಳಿ ನಡೆದಿದೆ.
ಅತಿ ವೇಗವಾಗಿ ಬಂದ ಪರಿಣಾಮ ನಿಯಂತ್ರಣ ಸಿಗದೇ ಕಾರು ನಾಲ್ಕೈದು ಬಾರಿ ಪಲ್ಟಿಯಾಗಿ ರಸ್ತೆ ಬದಿಗೆ ಬಂದು ಬಿದ್ದಿದೆ. ಘಟನೆಯಲ್ಲಿ ಉಮೇಶ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಡುಬಾಳ ಗ್ರಾಮದಿಂದ ಮನ್ನಾಏಖೇಳಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.