ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ಸಹಚರನ ಸೆರೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸರಿಂದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಶೀರ್ ಯಾನೆ ಸದ್ದು ಯಾನೆ ಸಾದು ಯಾನೆ ಮಾಯ (32) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.