February 2, 2026

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಎಂಜಿನಿಯರ್ ಮೃತ್ಯು

0
n34298693416399795160149bc872b4551ec69d537b541b1f98e3eb08e5fd22daa36ac8e0375934e3e9f729.jpg

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸುಪರಿಂಟೆಂಡೆಂಟ್ ಎಂಜಿನಿಯರ್ ಮೃತಪಟ್ಟ ಘಟನೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

ರಂಗರಾಜು ಎಸ್. ಎ (59) ಮೃತಪಟ್ಟ ಸೂಪರಿಂಟೆಂಡೆಂಟ್ ಎಂಜಿನಿಯರ್. ಮೃತ ರಂಗರಾಜು ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತಬೇಕಿತ್ತು. ಆದರೆ ತಿಳಿಯದೆ ಬೆಳಗಾವಿ ಬೆಂಗಳೂರು ರೈಲಿಗೆ ಹತ್ತಿದ್ದಾರೆ. ಬೇರೆ ರೈಲು ಹತ್ತಿದ್ದೇನೆ ಎಂದು ತಿಳಿದು ಈ ವೇಳೆ ಚಲಿಸುತ್ತಿದ್ದ ರೈಲಿನಿಂದ ಇಳಿಯುತ್ತಿದ್ದಂತೆ ಫ್ಲಾಟ್ ಫಾರಂ ನಲ್ಲಿ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಬಿಬಿಎಂಪಿಯ ಕೆಆರ್ ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!