ಸೌಜನ್ಯ ಪರ ನ್ಯಾಯಕ್ಕೆ ಆಗ್ರಹಿಸಿ “ಧರ್ಮಸ್ಥಳ ಚಲೋ” ನಡೆಸಲು ನಿರ್ಧಾರ

ಬೆಂಗಳೂರು: 2012 ರಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 17 ವರ್ಷದ ಸೌಜನ್ಯ ಪರ ನ್ಯಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ ರಾಜ್ಯದ ಹಲವಾರು ಹೋರಾಟಗಾರರು, ಹೋರಾಟವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು “ಧರ್ಮಸ್ಥಳ ಚಲೋ” ನಡೆಸಲು ನಿರ್ಧರಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದರೂ, ಪ್ರಕರಣದ ಅಪರಾಧಿಗಳು ಇಂದಿಗೂ ಪತ್ತೆಯಾಗಿಲ್ಲ. ಬೆಂಗಳೂರಿನ ಪೊಲೀಸರು ಈ ಹಿಂದೆ ಸಭೆ ನಡೆಸಲು ಹೋರಾಟಗಾರರಿಗೆ ಅನುಮತಿ ನೀಡಿರಲಿಲ್ಲ. ಇದನ್ನು ವಿರೋಧಿಸಿ ಹೋರಾಟಗಾರರು ಕರ್ನಾಟಕ ಹೈಕೋರ್ಟ್‌ಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಭೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.