ಮಲ್ಪೆ: ಮೀನು ಕದ್ದ ಆರೋಪದಡಿ ಮಹಿಳೆಯನ್ನ ಮರಕ್ಕೆ ಕಟ್ಟಿಹಾಕಿ ಹಲ್ಲೆ: ಮಹಿಳೆ ಸೇರಿದಂತೆ ನಾಲ್ವರ ಬಂಧನ

ಉಡುಪಿ: ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ಎಂದು ಗುರುತಿಸಲಾಗಿದೆ. ಮಾರ್ಚ್ 18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.