ಬಾವಿಗೆ ಬಿದ್ದು ಇಬ್ಬರು ಬಾಲಕರು ಸಾವು

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹೋಳಿ ಹಬ್ಬದ ಬಣ್ಣವಾಡಿದ ಬಳಿಕ, ಬಾವಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇದಾಂತ ಹಿರೇಕೋಡಿ (11) ಹಾಗೂ ಮನೋಜ ಕಲ್ಯಾಣಿ (9) ಎಂಬ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.
ರಂಗಪಂಚಮಿ ಅಂಗವಾಗಿ ಬಣ್ಣದಾಟ ಆಡಿ ಸ್ನಾನ ಮಾಡಲು ಬಾವಿಗೆ ಇಳಿದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು. ಶವಗಳನ್ನು ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು. ಸದಲಗಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.