ಪೊಲೀಸ್ ಠಾಣೆಯಲ್ಲೇ ಜೂಜಾಟವಾಡಿದ ಪೊಲೀಸರು: ಐವರು ಪೊಲೀಸರು ಅಮಾನತು

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆಯೊಳಗೆ ಇಸ್ಪೀಟು ಆಡಿದ ಆರೋಪದ ಮೇಲೆ ಪೊಲೀಸ್ ಇಲಾಖೆ ಬುಧವಾರ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಅಮಾನತುಗೊಂಡ ಪೊಲೀಸ್ ಅಧಿಕಾರಿಗಳನ್ನು ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಮಿಯಾ, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗರಾಜ್, ಸಾಯಿಬಣ್ಣ, ಇಮಾಮ್ ಮತ್ತು ಕಾನ್‌ಸ್ಟೆಬಲ್ ನಾಗಭೂಷಣ್ ಎಂದು ಗುರುತಿಸಲಾಗಿದೆ.
ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸುಲು ಅವರು ಐವರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಘಟನೆಯ ಬಗ್ಗೆ ವಿವರಣೆ ಕೋರಿ ಎಸ್‌ಐ ತಿರುಮಲೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.