March 5, 2026

ಬಿಜೆಪಿ ಯುವ ನಾಯಕನಿಂದ 7 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

0
image_editor_output_image1762897106-1742475374744.jpg

ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.

ಏಳು ವರ್ಷದ ಮಗುವನ್ನು ದುಷ್ಕರ್ಮಿಯನ್ನು ಬಿಜೆಪಿ ಯುವ ನಾಯಕ ದೇವು ನಾಯಕ್ ಎಂದು ಗುರುತಿಸಲಾಗಿದೆ.

ಆರೋಪಿಯು ಮಗು ಆಟವಾಡುತ್ತಿದ್ದಾಗ ಆಕೆಯ ಕಣ್ಣುಗಳಿಗೆ ಬಟ್ಟೆ ಕಟ್ಟಿ, ಬಾಯಿ ಮುಚ್ಚಿ, ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ನಂತರ ಅಪರಾಧ ಎಸಗಿದ್ದಾನೆ ಎಂದು ಹೇಳಲಾಗಿದೆ. ಅಷ್ಟೆ ಅಲ್ಲದೆ, ದೇವು ನಾಯಕ್‌ನ ಈ ಕೃತ್ಯಕ್ಕೆ ಮಹಿಳೆಯೊಬ್ಬರು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ಮುಂಬರುವ ಬಳ್ಳಾರಿ ಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ದೇವು ನಾಯಕ್ ಪೈಪೋಟಿ ನಡೆಸುತ್ತಿದ್ದ ಎನ್ನಲಾಗಿದೆ. ದುಷ್ಕರ್ಮಿ ಬಿಜೆಪಿಯ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದ ಎಂದು ವರದಿಗಳು ಉಲ್ಲೇಖಿಸಿವೆ. ಜೊತೆಗೆ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಆತನು ಬಿಜೆಪಿಯ ಹಲವಾರು ಪ್ರಮುಖ ನಾಯಕರೊಂದಿಗೆ ಇರುವ ಛಾಯಾಚಿತ್ರಗಳಿವೆ.

Leave a Reply

Your email address will not be published. Required fields are marked *

error: Content is protected !!