ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಮಗಳೂರು: 9ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿಯ ಬೋವಿ ಕಾಲನಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ವರ್ಷಿಣಿ (15 ವರ್ಷ) ಎಂದು ಗುರುತಿಸಲಾಗಿದ್ದು, ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಆತಂಕದಿಂದ ಮನನೊಂದು ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




