ಎಮ್ಮೆಮಾಡು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ: ಮೂವರು ಆರೋಪಿಗಳ ಬಂಧನ
ನಾಪೋಕ್ಲು: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದ ಕೂರುಳಿ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಕೂರುಳಿ ಗ್ರಾಮದ ರಸ್ತೆಯಲ್ಲಿ ದಿನಾಂಕ 20-3-2025 ರಂದು ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಎಂ.ಎಚ್. ಸಾದಿಕ್(30)ಕೆ.ಎಂ. ಅಶ್ರಫ್(44) ಸರ್ಫುದ್ದೀನ್ (24) ಎಂಬುವವರನ್ನು 10.37 2 2 2 2 2 ಹಾಗೂ ಕೃತ್ಯಕ್ಕೆ ಬಳಸಿದ ಮಾರುತಿ ಬೀಝ ಕಾರಿನೊಂದಿಗೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಸೂರಜ್, ಮಡಿಕೇರಿ ಗ್ರಾಮಾಂತರ ಪ್ರಭಾರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.




