ಮದುವೆ ಆಗುವಂತೆ 42ರ ಅಂಕಲ್ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ
ಗದಗ: ಪ್ರೀತಿ, ಪ್ರೇಮ, ಮದುವೆ ವಿಷಯದಲ್ಲಿ 42ರ ಅಂಕಲ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಪಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಂದನಾ ಗದಗದ ಜಿಮ್ಸ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಸಮಾಜ ಕಲ್ಯಾಣ ಇಲಾಖೆ ಬೆಟಗೇರಿ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್ ನಲ್ಲಿದ್ದಕೊಂಡೇ ವ್ಯಾಸಂಗ ಮಾಡುತ್ತಿದ್ದಳು.
ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ.




