March 5, 2026

ತಂದೆಯ ಜೊತೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಮುರಿದು ಬಿದ್ದ ಮರ: ಮೂರು ವರ್ಷದ ಮಗು ಸಾವು

0
image_editor_output_image1820014624-1742684792915.jpg

ಬೆಂಗಳೂರು: ನಗರದಲ್ಲಿ ಸಂಜೆ ಸುರಿದ ಮಳೆಗೆ ಮರ ಬೈಕ್ ಮೇಲೆ ಮುರಿದು ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ ನಡೆದಿದೆ.

ಮೃತ ಮಗುವನ್ನು ರಕ್ಷಾ ಎಂದು ಗುರುತಿಸಲಾಗಿದೆ. ತಂದೆಯ ಜೊತೆ ಮಗು ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮರ ಬಿದ್ದು ಮಗುವಿಗೆ ಗಂಭೀರ ಗಾಯವಾಗಿತ್ತು. ತಕ್ಷಣ ಮಗುವನ್ನು ಫೋಷಕರು ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!