ಪ್ರತ್ಯೇಕ ಪ್ರಕರಣ: ಬಿಸಿಲು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರುಪಾಲು

ಹಾಸನ: ಜಿಲ್ಲೆಯಲ್ಲಿ ಸಂಭವಿಸಿರುವ ಎರಡು ಪ್ರತ್ಯೇಕ ಜಲ ದುರಂತದಲ್ಲಿ ಇಬ್ಬರು ಯುವಕರು ಸೇರಿ ನಾಲ್ವರು ಜಲ ಸಮಾಧಿಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ. ಮೃತರನ್ನು ಭರತ್ (27) ಮತ್ತು ಪ್ರಕಾಶ್ (29) ಎಂದು ಗುರುತಿಸಲಾಗಿದೆ. ಪ್ರಕಾಶ್ ಸಕಲೇಶಪುರದ ಕಾಟಳ್ಳಿ ಮೂಲದವನಾಗಿದ್ದಾನೆ. ಭರತ್ ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ನಿವಾಸಿಯಾಗಿದ್ದಾನೆ.
ಬಿಸಿಲು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಈ ಇಬ್ಬರೂ ಸ್ನೇಹಿತರು ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಸರಿಯಾಗಿ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿ, ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.