March 4, 2026

ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

0
image_editor_output_image1794156036-1742685711435.jpg

ಕೊಪ್ಪಳ: ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ಕೇಸರಹಟ್ಟಿಯಲ್ಲಿ ನಡೆದಿದೆ.

ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ಧೃತಿಗೆಡದ ವಿದ್ಯಾರ್ಥಿ ತನ್ನ ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದ.

ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಶಿಕ್ಷಕರು ಬಂದು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!