March 4, 2026

ಕಾಸರಗೋಡು: ಆಸ್ಪತ್ರೆ ವಾರ್ಡನ್ ಮಾನಸಿಕ ಕಿರುಕುಳ: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1792308994-1742686003886.jpg

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಯೋರ್ವರು ಶನಿವಾರ ಕೋಜಿ ಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21) ಮೃತಪಟ್ಟವಳು.

ಡಿ. 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿಸಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Leave a Reply

Your email address will not be published. Required fields are marked *

error: Content is protected !!