ಗೃಹಲಕ್ಷ್ಮಿಯವರಿಗೆ ಗುಡ್ ನ್ಯೂಸ್: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆಂದು ಹೇಳಿದರು.