March 4, 2026

ಚಿಕ್ಕಮಗಳೂರು: ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವು: ದೃಶ್ಯ ಸಿಸಿಟಿವಿಯಲ್ಲಿ ಸೆರೆ

0
image_editor_output_image-293747347-1742802101310.jpg

ಚಿಕ್ಕಮಗಳೂರು: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ.

ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ. ನಿಶಾಂತ್, ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ ಸಂದರ್ಭ ದುರ್ಘಟನೆ ಸಂಭವಿಸಿದೆ.

ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

Leave a Reply

Your email address will not be published. Required fields are marked *

error: Content is protected !!