ಇಟ್ಟಿಗೆ, ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ: ಮೂವರು ಆರೋಪಿಗಳ ಬಂಧನ
ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್ ಹುಸೇನ್ ಎಂದು ಗುರುತಿಸಲಾಗಿದೆ. ಇದರೊಂದಿಗೆ, ಈಗಾಗಲೇ ಚಿನ್ನ ಕಳ್ಳಸಾಗಣೆ ಪ್ರಕರಣದಿಂದ ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆಂಗಳೂರು ಚಿನ್ನದ ವಿಚಾರಕ್ಕೆ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗುವಂತಾಗಿದೆ.




