ಪುತ್ತೂರು: ಭಕ್ತಕೋಡಿ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ವಿಷ ಸೇವಿಸಿ ಆತ್ಮಹತ್ಯೆ
ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ವಿಷ ಪದಾರ್ಥ ಸೇವಿಸಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಜೀವನ್ಮರಣ ಹೋರಾಟ ನಡೆಸಿದ ಅವರು ಮಾರ್ಚ್ 24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.




